ಸೆಪ್ಟೆಂಬರ್ 16 ಮತ್ತು 17ರಂದು ನಡೆದ ಕಳ್ಳತನ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ಕಳವು ಮಾಡಲಾಗಿದ್ದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
₹11.18 ಲಕ್ಷ ಮೌಲ್ಯದ ಸ್ವತ್ತು ವಶ
ಮೊದಲ ಪ್ರಕರಣದಲ್ಲಿ 67.600 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹8,72,900 ಆಗಿದೆ. ಮತ್ತೊಂದು ಪ್ರಕರಣದಲ್ಲಿ 13.639 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯ ₹1,60,800 ಎಂದು ಅಂದಾಜಿಸಲಾಗಿದೆ. ಜೊತೆಗೆ ₹85,000 ಮೌಲ್ಯದ ಒಂದು ಐಫೋನ್ನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಎರಡೂ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಚಿನ್ನಾಭರಣ ಹಾಗೂ ಐಫೋನ್ ಸೇರಿದಂತೆ ಒಟ್ಟು ₹11,18,700 ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈಲ್ವೆ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿ ಪ್ರಕರಣಗಳ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.









