ಬೆಂಗಳೂರು, ಅ.1: ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವರಾದ ಸಂತೋಷ್ ಎಸ್.ಲಾಡ್ ಅವರು, ವಿಕಾಸಸೌಧದಲ್ಲಿ ಗಾರ್ಮೆಂಟ್ಸ್ ಉದ್ದಿಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಭವಿಷ್ಯ ನಿಧಿ ಮತ್ತು ಪಿಂಚಣಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಕುರಿತು ಸಭೆ ನಡೆಸಿ ಚರ್ಚಿಸಿದರು. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಫಾಹಿಮ್, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಉಪ ಕಾರ್ಮಿಕ ಆಯುಕ್ತರಾದ ರವಿಕುಮಾರ್ ಮತ್ತು ಸೋಮಣ್ಣ, ಗಾರ್ಮೆಂಟ್ಸ್ ಉದ್ದಿಮೆಯ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಆಡಳಿತ ಮಂಡಳಿಯ ಮುಖ್ಯಸ್ಥರು, ಭವಿಷ್ಯ ನಿಧಿ ಸಂಘಟನೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.